SSP OBC Scholarship 2023-24 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು, ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSP OBC Scholarship 2023-24 : Scholarship Details
ಇಲಾಖೆ ಹೆಸರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ವಿದ್ಯಾರ್ಥಿವೇತನ : ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿವೇತನ
ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
1) ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
2) ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
3) ವಿದ್ಯಾರ್ಥಿಗಳ ಇ-ಮೇಲ್ ಐ.ಡಿ
4) ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
5) ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
6) ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
7) ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
8) ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
9) ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
10) ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )
ಅರ್ಜಿ ಸಲ್ಲಿಕೆಯ ವಿಧಾನ :
• ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಈ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ. ಅಪ್ಲಿಕೇಷನ್ ನಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ವಿದ್ಯಾರ್ಥಿಯ ವೈಯಕ್ತಿಕ ವಿವರ, ವ್ಯಾಸಂಗ, ಇತ್ಯಾದಿ) ನಂತರ ನಿಗದಿತ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿರುವ ದಿನಾಂಕ :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಫೆಬ್ರುವರಿ, 2024
SSP OBC Scholarship 2023-24 : Important Links
| Apply Online | Click Here |
ವಿದ್ಯಾರ್ಥಿ ವೇತನಗಳು ವಿದ್ಯಾರ್ಥಿಗಳ ಮುಂದಿನ ವ್ಯಾಸಂಗಕ್ಕೆ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.