Free Sewing Machine Scheme Raichur 2024 : ಜಿಲ್ಲಾ ಪಂಚಾಯತ್, ರಾಯಚೂರು 2024-25ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಮೋಟಾರ್ ಸಹಿತ ಹೊಲಿಗೆಯಂತ್ರ ವಿತರಣೆಗಾಗಿ ಜಿಲ್ಲಾ ವಲಯದಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿದ/ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು, ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Free Sewing Machine Scheme Raichur 2024 : Scheme Details
ಕಾರ್ಯಕ್ರಮ ವಿವರ : ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಮೋಟಾರ್ ಸಹಿತ ಹೊಲಿಗೆ ಯಂತ್ರ ವಿತರಣೆ.
ವಿತರಿಸುವ ಹೊಲಿಗೆಯಂತ್ರಗಳ ಸಂಖ್ಯೆ : ಒಟ್ಟು 816 ಹೊಲಿಗೆ ತರಬೇತಿ ಹೊಂದಿದ/ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಹೊಲಿಗೆಯಂತ್ರಗಳ ವಿತರಣೆ.

ಉಚಿತ ಹೊಲಿಗೆಯಂತ್ರ ಪಡೆಯಲು ಇರಬೇಕಾದ ಅರ್ಹತೆಗಳು :
• ಮೋಟಾರ್ ಸಹಿತ ಹೊಲಿಗೆಯಂತ್ರ ಪಡೆಯುವದಕ್ಕಾಗಿ ಪ್ರದೇಶಕ್ಕೊಳಪಡುವ ಮಹಿಳಾ ಅಭ್ಯರ್ಥಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. (ಪಟ್ಟಣ ಪಂಚಾಯತ್/ ಪುರಸಭೆ/ ನಗರಸಭೆಗೊಳಪಡುವ ಮಹಿಳೆಯರು ಸದರಿ ಯೋಜನೆಗೆ ಅರ್ಹರಲ್ಲ)
• ಅರ್ಜಿದಾರರು ಕನಿಷ್ಠ 7ನೇ ತರಗತಿ ಉತ್ತೀರ್ಣಗಾಗಿರಬೇಕು.
• ಅರ್ಜಿದಾರರು ಹೊಲಿಗೆ ವೃತ್ತಿಯಲ್ಲಿ ತರಬೇತಿ ಪಡೆದಿರಬೇಕು (ಪ್ರಮಾಣ ಪತ್ರ ಲಗತ್ತಿಸುವುದು)
• ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.
• ಸರಕಾರದ ಯಾವುದೇ ಯೋಜನೆಯಡಿ ಈಗಾಗಲೇ ಹೊಲಿಗೆಯಂತ್ರವನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
• ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷಗಳು ಇರತಕ್ಕದ್ದು (ಅರ್ಜಿ ಸಲ್ಲಿಸುವ ಪ್ರಾರಂಭವಾಗುವ ದಿನಾಂಕದಂದು)
ಹೊಲಿಗೆಯಂತ್ರಕ್ಕಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
• ಆಧಾರ ಕಾರ್ಡ್.
• ಪಡಿತರ ಚೀಟಿ.
• ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡ/ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಮಾತ್ರ)
• ಹೊಲಿಗೆಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ/ ಆಯಾ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೇಲರಿಂಗ್)ವೃತ್ತಿಯಲ್ಲಿ ತರಬೇತಿ ಹೊಂದಿರುವ/ವೃತ್ತಿಯಲ್ಲಿ ತೊಡಗಿರುವ ಬಗ್ಗೆ ದೃಢೀಕರಣ ಪ್ರಮಾಣ ಪತ್ರ.
• ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣ ಪತ್ರ/ಅಂಕಪಟ್ಟಿ/ಇನ್ನೀತರ ಪ್ರಮಾಣ ಪತ್ರ)
ಅಭ್ಯರ್ಥಿ ವಿಕಲಚೇತನ/ವಿಧವಾ ಪ್ರಮಾಣ ಪತ್ರ ಇದ್ದಲ್ಲಿ.
ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ.
• ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣ ಪತ್ರ/ಅಂಕಪಟ್ಟಿ/ಇನ್ನೀತರ ಪ್ರಮಾಣ ಪತ್ರ)
ಅರ್ಜಿ ಸಲ್ಲಿಕೆಯ ವಿಧಾನ :
• ಅಭ್ಯರ್ಥಿಗಳು ಈ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಪಂಚಾಯತ್ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ. ಅಪ್ಲಿಕೇಷನ್ ನಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ಅಭ್ಯರ್ಥಿಯ ವೈಯಕ್ತಿಕ ವಿವರ, ವಿಳಾಸ, ಇತ್ಯಾದಿ) ನಂತರ ನಿಗದಿತ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಿ.
• ಅರ್ಜಿದಾರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿಯ ಪ್ರತಿಯೊಂದಿಗೆ ಅಪ್ಲೋಡ್ ಮಾಡಲಾದ ಎಲ್ಲಾ ದಾಖಲಾತಿಗಳ ಒಂದು ಪ್ರತಿಯನ್ನು ಉಪ ನಿರ್ದೇಶಕರ ಕಛೇರಿ (ಗ್ರಾಮೀಣ ಕೈಗಾರಿಕೆ) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಹೈದರಾಬಾದ್ ರಸ್ತೆ, ರಾಯಚೂರು ಇಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.
ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿರುವ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 13 ಸೆಪ್ಟೆಂಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಅಕ್ಟೋಬರ್, 2024
Free Sewing Machine Scheme Raichur 2024 : Important Links
| NOTIFICATION | CLICK HERE |
| APPLY ONLINE | CLICK HERE |
| TELEGRAM JOIN LINK | CLICK HERE |
| WHATSAPP GROUP LINK | CLICK HERE |
ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.